ಗದಗ :
ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿದ್ಯಾರ್ಥಿನಿ ಮನೆಗೆ ಬಂದ ಬಿಇಓ(ಕ್ಷೇತ್ರ ಶಿಕ್ಷಣಾಧಿಕಾರಿ) ಮೇಲೆ ವಿದ್ಯಾರ್ಥಿನಿಯ ಪೋಷಕರು ಹಾಗೂ ಸ್ಥಳೀಯರು ಹಲ್ಲೆ ನಡೆಸಿದ ಘಟನೆ ಗದಗ ಜಿಲ್ಲೆಯ ಮುಂಡರಗಿಯಲ್ಲಿ ನಡೆದಿದೆ.
ಎಸ್.ಎನ್.ಹಳ್ಳಿಗುಡಿ ಹಲ್ಲೆಗೊಳಗಾದ ಮುಂಡರಗಿ ಕ್ಷೇತ್ರ ಶಿಕ್ಷಣಾಧಿಕಾರಿ. ಮನೆ-ಮನೆಗೆ ಭೇಟಿ ಕಾರ್ಯಕ್ರಮದ ಅಂಗವಾಗಿ ಕ್ಷೇತ್ರದ ಹಳ್ಳಿಕೇರಿ ಗ್ರಾಮಕ್ಕೆ ಶಂಕರ್ ಭೇಟಿ ನೀಡಿದ್ದಾರೆ. ಆಗ ರಾತ್ರಿ ವೇಳೆ ಗ್ರಾಮದ ವಿದ್ಯಾರ್ಥಿನಿ ಮನೆಗೆ ಹೋಗಿದ್ದಾರೆ. ಮನೆಯಲ್ಲಿ ವಿದ್ಯಾರ್ಥಿನಿ ಒಬ್ಬಳೇ ಇದ್ದಾಗ ಚೆನ್ನಾಗಿ ಓದು ಎಂದು ಬೆನ್ನುತಟ್ಟಿ ಪ್ರೋತ್ಸಾಹಿಸಿ ಹೆಗಲ ಮೇಲೆ ಕೈಹಾಕಿದ್ದಾರೆ.
ಈತ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿದ್ದಾನೆ ಎಂದು ಆರೋಪಿಸಿ ವಿದ್ಯಾರ್ಥಿನಿಯ ಪೋಷಕರು ಹಾಗೂ ಸ್ಥಳೀಯರು ಆತನ ಮನೆಗೆ ನುಗ್ಗಿ ಹಿಗ್ಗಾಮಗ್ಗಾ ಥಳಿಸಿದ್ದಾರೆ. ಹಲ್ಲೆಗೊಳಗಾದ ಬಿಇಒ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಈ ಬಗ್ಗೆ ಮುಂಡರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರು ಬಿಇಒ ಅವರನ್ನು ವಿಚಾರಿಸಿದಾಗ ವಿದ್ಯಾರ್ಥಿನಿಯೇ ಅವರನ್ನು ಮನೆಗೆ ಕರೆದಿದ್ದಳು. ಆದಕಾರಣ ಹೋಗಿ ಚಹಾ ಕುಡಿದು ಬಂದೆ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
