ವಿದ್ಯಾರ್ಥಿಗಳಿಗೆ ಹಳೆ ಬಸ್ ಪಾಸ್‍ ತೋರಿಸಿ ಪ್ರಯಾಣಿಸಲು ಅವಕಾಶ!!

ಬೆಂಗಳೂರು :  

     ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. , ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಿರುವುದರಿಂದ ವಿದ್ಯಾರ್ಥಿಗಳ ಹಳೆಯ ಬಸ್‌ ಪಾಸ್‌ ತೋರಿಸಿ ಈ ತಿಂಗಳ ಅಂತ್ಯದವರೆಗೂ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

      2019-20ನೇ ಸಾಲಿನಲ್ಲಿ ವಿತರಿಸಲಾಗಿದ್ದ ವಿದ್ಯಾರ್ಥಿಗಳ ಬಸ್‌ ಪಾಸುಗಳಲ್ಲಿ 2020ರ ಡಿ.31ರವರೆಗೆ ಮಾತ್ರ ಮಾನ್ಯ ಮಾಡಲು ರಾಜ್ಯ ರಸ್ತೆ ಸಾರಿಗೆ ನಿಗಮವು ನಿರ್ಧಾರ ಕೈಗೊಂಡಿತ್ತು. ಈಗ ಪಾಸ್‌ಗಳ ಅವಧಿಯನ್ನು ಒಂದು ತಿಂಗಳು ವಿಸ್ತರಿಸಲಾಗಿದ್ದು,  ಜ.30ರವರೆಗೂ  ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

      ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಶುಲ್ಕ ಪಾವತಿಸಿರುವ ರಸೀದಿಯ ಜೊತೆ 2019-20ನೇ ಸಾಲಿನ ಬಸ್ ಪಾಸ್‍ನ್ನು ಸಂಬಂಧಪಟ್ಟ ಮಾರ್ಗದಲ್ಲಿ ಅಥವಾ ಹೊಸ ವಿಳಾಸದಲ್ಲಿರುವ ಶಾಲಾ-ಕಾಲೇಜುಗಳಿಗೆ ತೆರಳಲು ಅನುಕೂಲವಾಗುವಂತೆ ಕೆಎಸ್‌ಆರ್‌ಟಿಸಿ ಅವಕಾಶ ಕಲ್ಪಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap