ಮಂಗಳೂರು:

ವಿದ್ಯಾರ್ಥಿನಿಗೆ ಗಾಂಜಾ ತಿನ್ನಿಸಿ ಅರೆ ಪ್ರಜ್ಞಾವಸ್ಥೆ ತಲುಪಿದ ಬಳಿಕ ಸಹಪಾಠಿ ವಿದ್ಯಾರ್ಥಿಗಳೇ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಕೆಲವು ತಿಂಗಳ ಹಿಂದೆ ಕಾರೊಂದರಲ್ಲಿ ಈ ಘಟನೆ ನಡೆದಿದ್ದು, ಪುತ್ತೂರಿನ ಖಾಸಗಿ ಕಾಲೇಜಿನ ಒಟ್ಟು 4 ಜನ ವಿದ್ಯಾರ್ಥಿಗಳು ವಿದ್ಯಾರ್ಥಿನಿಯನ್ನು ಕಾಡಿಗೆ ಕರೆದುಕೊಂಡು ಹೋಗಿ ವಿದ್ಯಾರ್ಥಿನಿಗೆ ಡ್ರಗ್ಸ್ ತಿನ್ನಿಸಿ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೆ ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡಿಕೊಂಡಿದ್ದರು. ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿತ್ತು.
ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದು, ಇನ್ನಿಬ್ಬರು ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ.
ಈ ಬಗ್ಗೆ ಪ್ರಕಟಣೆ ನೀಡಿದ ಎಸ್ ಪಿ, ಕೃತ್ಯದಲ್ಲಿ ತೊಡಗಿರುವ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿಗಳ ಬಗ್ಗೆ ತನಿಖೆ ನಡೆಯುತ್ತಿದೆ. ಯಾರೂ ಈ ವೀಡಿಯೋವನ್ನು ಶೇರ್ ಮಾಡಬಾರದು. ಹಾಗೆ ಮಾಡುವುದು ಅಪರಾಧ ಎಂದು ತಿಳಿಸಿದ್ದಾರೆ.
ಈ ವೀಡಿಯೋ ಪ್ರಸಾರದ ಬಗ್ಗೆ ಸ್ವಯಂ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








