ಉಳ್ಳಾಲ:
ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ರೈಲಿನಡಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಸೋಮೇಶ್ವರ ರೈಲು ನಿಲ್ದಾಣದಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.
ಇಂಜಿನಿಯರಿಂಗ್ ಮಾಡುತ್ತಿರುವ ಬೆಳಗಾವಿ ಮೂಲದ ವಿದ್ಯಾರ್ಥಿ ಸಮ್ಮದ್ ರಾಯಗೌಡ(23) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ರಾಯಗೌಡ ಮಂಗಳೂರಿನ ಉಳ್ಳಾಲ ಸೋಮೇಶ್ವರ ರೈಲ್ವೇ ನಿಲ್ದಾಣದಲ್ಲಿ ರೈಲು ಬರುವ ಮೊದಲೇ ಬಂದು ಕೂತಿದ್ದನು. ನಂತರ ರೈಲು ಬರುತ್ತಿದ್ದಂತೆ ಹಳಿಗೆ ಹಾರಿ ರೈಲಿನಡಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆಗೆ ಪ್ರೇಮ ವೈಫಲ್ಯ ಕಾರಣವಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಆಗಮಿಸಿದ್ದು, ತನಿಖೆ ಮುಂದುವರಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ