ತುಮಕೂರು :
ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ ಖುಷಿಯಲ್ಲಿ ನಡೆಯುತ್ತಿದ್ದ ಸಂಭ್ರಮಾಚರಣೆ ವೇಳೆ ಶಾಲಾ, ಕಾಲೇಜು ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಎಂಬ ಆರೋಪದ ಕಾರಣ ಯುವಕನನ್ನು ಹಿಡಿದು ಸಾರ್ವಜನಿಕರು ಹಾಗೂ ವಿದ್ಯಾರ್ಥಿನಿಯರೇ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಜಿಲ್ಲೆಯ ತಿಪಟೂರು ಪಟ್ಟಣದಲ್ಲಿ ಜರುಗಿದೆ.
ಹೈದರಾಬಾದ್ ದಿಶಾ ಪ್ರಕರಣ ಅತ್ಯಾಚಾರಿಗಳನ್ನು ಸೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್ ನೇತೃತ್ವದ ತಂಡ ಎನ್‍ಕೌಂಟರ್ ಮಾಡಿರುವ ಹಿನ್ನೆಲೆ ತಿಪಟೂರು ಪಟ್ಟಣದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಭ್ರಮಾಚರಣೆ ಮಾಡಿದ್ದಾರೆ.
ಈ ನಡುವೆ ಹುಡಿಗಿಯರನ್ನ ಚುಡಾಯಿಸಿದ ವ್ಯಕ್ತಿಗೆ ವಿದ್ಯಾರ್ಥಿನಿಯರು ಹಾಗೂ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ವ್ಯಕ್ತಿಯೊಬ್ಬರು ಪರಿಸ್ಥಿತಿಯನ್ನು ಹತೋಟಿಗೆ ತಂದರು.