ತುಮಕೂರು:
ಬೆಂಗಳೂರಿನಿಂದ ತುಮಕೂರಿಗೆ ಉಪನಗರ ರೈಲು (ಸಬ್ ಅರ್ಬನ್) ಯೋಜನೆ ಮಂಜೂರಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
ನಗರದ ಗ್ರಂಥಾಲಯ ಮೈದಾನದಲ್ಲಿ ಶುಕ್ರವಾರ ಸ್ಮಾರ್ಟ್ ಸಿಟಿ ಯೋಜನೆಗಳ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದ ಅವರು, ಬೆಂಗಳೂರಿನಿಂದ ತುಮಕೂರಿಗೆ ಮೆಟ್ರೋ ಅಥವಾ ಸಬ್ ಅರ್ಬನ್ ರೈಲು ಯೋಜನೆಯನ್ನು ವಿಸ್ತರಿಸುವಂತೆ ಸರಕಾರಕ್ಕೆ ಒತ್ತಾಯ ಮಾಡಿದ್ದೆವು. ಈಗ ಉಪನಗರ ರೈಲು ಯೋಜನೆ ಮಂಜೂರಾಗಿದೆ ಎಂದರು.
ಇಂದು 5206 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸ್ಮಾರ್ಟ್ ಸಿಟಿ ಅಡಿ ಚಾಲನೆ ನೀಡಲಾಗಿದೆ. ಕಾಲಮಿತಿಯೊಳಗೆ ಈ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ