ಬಾಗಲಕೋಟೆ:
ಸಕ್ಕರೆ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ ಗ್ರಾಮದ ಡಿಸ್ಟಿಲರಿ ಸಂಸ್ಕರಣಾ ಘಟಕದಲ್ಲಿ ಬಾಯ್ಲರ್ ಸ್ಫೋಟಗೊಂಡು ಈ ಘಟನೆ ಸಂಭವಿಸಿದೆ. ಸ್ಫೋಟದ ರಭಸಕ್ಕೆ ಕಟ್ಟಡ ಕುಸಿದಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರುವ ಆತಂಕ ಮನೆಮಾಡಿದೆ.
ಡಿಸ್ಟಿಲರಿ ಸಂಸ್ಕರಣಾ ಘಟಕ ಬಿಜೆಪಿ ನಾಯಕ, ಮಾಜಿ ಸಚಿವ ಮುರುಗೇಶ್ ನಿರಾನಿ ಮಾಲಕತ್ವಕ್ಕೆ ಸೇರಿದ್ದು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಮುಧೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ