ಸೂಲಗಿತ್ತಿ ನರಸಮ್ಮ ವಿಧಿವಶ!!

ತುಮಕೂರು:

      ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸೂಲಗಿತ್ತಿ ನರಸಮ್ಮ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. 

      ಹದಿನೈದು ಸಾವಿರಕ್ಕೂ ಹೆಚ್ಚು ಹೆರಿಗೆಗಳನ್ನು ಮಾಡಿದ್ದ ಸೂಲಗಿತ್ತಿ ನರಸಮ್ಮ (98) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ನಗರದ ಬಿಜಿಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

      ಶ್ವಾಸಕೋಶದ ತೊಂದರೆಯಿಂದ ನರಸಮ್ಮ ಬಳಲುತ್ತಿದ್ದು, ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಕರೊದೊಯ್ಯಲಾಗಿತ್ತು.

      ನಿನ್ನೆ ರಾತ್ರಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಆರಂಭಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 3 ಗಂಟೆಗೆ ನರಸಮ್ಮ ಅವರು ನಿಧನ ಹೊಂದಿದ್ದಾರೆ.

      ಯಾವುದೇ ವೈದ್ಯಕೀಯ ಸಹಾಯವಿಲ್ಲದೆ ಸಾವಿರಕ್ಕೂ ಹೆಚ್ಚು ಹೆರಿಗೆ ಮಾಡಿಸಿದ್ದ ನರಸಮ್ಮ ಕಳೆದ 25 ದಿನಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಉಸಿರಾಟದ ತೊಂದರೆ, ವಯೋಸಹಜ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap