ತುಮಕೂರು :
ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ನಿನ್ನೆ ಕೊನೆಯುಸಿರೆಳೆದ ಪದ್ಮಶ್ರೀ ಪುರಸ್ಕೃತೆ ಸೂಲಗಿತ್ತಿ ನರಸಮ್ಮ ಅವರ ಪಾರ್ಥಿವ ಶರೀರ ತುಮಕೂರು ತಲುಪಿದೆ.
ನಗರದ ಗಾಜಿನ ಮನೆಯಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 1 ಗಂಟೆ ಬಳಿಕ ನಗರದ ಬೀದಿಯಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದೆ. ಬಳಿಕ ಮಧ್ಯಾಹ್ನ 2 ಗಂಟೆಗೆ ನರಸಮ್ಮ ಅವರ ಅಂತ್ಯ ಸಂಸ್ಕಾರ ನಡೆಯಲಿದೆ.
ಪಾವಗಡ ತಾಲ್ಲೂಕಿನ ಕೃಷ್ಣಾಪುರ ಗ್ರಾಮದ ನರಸಮ್ಮ 4 ಮಂದಿ ಹೆಣ್ಣು ಮಕ್ಕಳು, 4 ಮಂದಿ ಗಂಡು ಮಕ್ಕಳು ಮೊಮ್ಮಕ್ಕಳು, ಮರಿಮೊಮ್ಮಕ್ಕಳನ್ನು ಆಗಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ