ಚಾಮರಾಜನಗರ:
ಸುಳ್ವಾಡಿ ಮಾರಮ್ಮ ದೇವಾಲಯದಲ್ಲಿ ನಡೆದ ವಿಷ ಪ್ರಸಾದ ಪ್ರಕರಣದ 4 ಮಂದಿ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ ಜನವರಿ 29ರವರೆಗೆ ವಿಸ್ತರಿಸಲಾಗಿದೆ.
ಆರೋಪಿಗಳಾದ ಇಮ್ಮಡಿ ಮಹಾದೇವಸ್ವಾಮಿ, ಅಂಬಿಕಾ, ಡೊಡ್ಡಯ್ಯ ಮತ್ತು ಮಾದೇಶ ಅವರ ನ್ಯಾಯಾಂಗ ಬಂಧನದ ಅವಧಿ ಬುಧವಾರಕ್ಕೆ ಮುಕ್ತಾಯವಾಗಿತ್ತು. ಹಾಗಾಗಿ, ಪೊಲೀಸರು ಅವರನ್ನು ಮೈಸೂರು ಕಾರಾಗೃಹದಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಜಿ. ಬಸವರಾಜ ಅವರ ಮುಂದೆ ಹಾಜರು ಪಡಿಸಿದರು.
ಸೂಕ್ಷ್ಮ ಪ್ರಕರಣವಾಗಿರುವುದರಿಂದ ಭದ್ರತೆಯ ಕಾರಣಕ್ಕಾಗಿ ಮೈಸೂರು ಕೇಂದ್ರ ಕಾರಾಗೃಹದಲ್ಲಿರುವ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆದುಕೊಂಡು ಬಾರದೆ, ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಿದರು.
ಚಾಮರಾಜನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ವಿಚಾರಣೆಗಾಗಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು ಇದೇ ಮೊದಲು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








