ಮಂಡ್ಯ :
ನಾಳೆ(ಮೇ.29) ಮಂಡ್ಯದಲ್ಲಿ ಅಂಬಿ ಹುಟ್ಟು ಹಬ್ಬ ಆಚರಿಸುತ್ತಿದ್ದು, ಅಂದೇ ಸುಮಲತಾ ಅವರು ತಮ್ಮನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಿದ ಮಂಡ್ಯ ಜನತೆಗೆ ಕೃತಜ್ಞತಾ ಸಮಾವೇಶವನ್ನ ಹಮ್ಮಿಕೊಳ್ಳಲಿದ್ದಾರೆ.
ಸಮಾವೇಶದಲ್ಲಿ ದರ್ಶನ್, ಯಶ್, ರಾಕ್ ಲೈನ್ ವೆಂಕಟೇಶ್, ದೊಡ್ಡಣ್ಣ, ಅಭಿಷೇಕ್ ಭಾಗಿಯಾಗಲಿದ್ದು, ಸಿಲ್ವರ್ ಜ್ಯುಬಿಲಿ ಪಾರ್ಕ್ ನಲ್ಲಿ ಕೃತಜ್ಞತ ಸಭೆ ನಡೆಯಲಿದೆ. ಸಭೆಗೂ ಮುನ್ನ ಸಾಮಾಜಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಹಾಗೇ ಅಂಬಿ ಹುಟ್ಟೂರು ದೊಡ್ಡರಸಿನಕೆರೆಗೆ ಭೇಟಿ ನೀಡಿ ಬಳಿಕ ಕೃತಜ್ಞತೆ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಸಹಸ್ರಾರು ಸಂಖ್ಯೆಯಲ್ಲಿ ಸ್ವಾಭಿಮಾನಿ ಪಡೆ ಭಾಗಿಯಾಗುವ ಸಾಧ್ಯತೆಯಿದೆ. ಸಂಸತ್ತಿನಲ್ಲಿ ಪ್ರಮಾಣ ವಚನ ಸ್ವೀಕಾರ ಬಳಿಕ ಕ್ಷೇತ್ರ ಪ್ರವಾಸ ಮಾಡಲಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ