ಮಂಡ್ಯ:
ಸಕ್ಕರೆ ನಾಡು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ನಾಡ ದೇವತೆ ಶ್ರೀ ಚಾಮುಂಡೇಶ್ವರಿಗೆ ದರ್ಶನ ಪಡೆಯಲು ಆಗಮಿಸಿದ ಸುಮಲತಾ, ಚಾಮುಂಡಿ ಬೆಟ್ಟದ ದೇವಾಲಯದ ಪ್ರವೇಶದ್ವಾರದಲ್ಲಿರುವ ಗಣಪತಿ ದೇವಾಲಯದಲ್ಲಿ ನಾಮಪತ್ರ ಇರಿಸಿ ಪೂಜೆ ಸಲ್ಲಿಸಿದ ನಂತರ ದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಒಂದು ಒಳ್ಳೆಯ ಉದ್ದೇಶದಿಂದ ಹೆಜ್ಜೆ ಇಟ್ಟಿರುವುದರಿಂದ ಒಳ್ಳೆಯದು ಮಾಡು ಎಂದು ಚಾಮುಂಡೇಶ್ವರಿಯಲ್ಲಿ ಕೇಳಿಕೊಂಡಿದ್ದೇನೆ ಎಂದು ತಿಳಿಸಿದರು.
ಇನ್ನೂ ಮಂಡ್ಯದ ಜನತೆ ದಾರಿ ಉದ್ದಕ್ಕೂ ಸಾವಿರಾರು ಜನತೆ ರಸ್ತೆ ಬದಿಯಲ್ಲಿ ನಿಂತು, ಸುಮಲತಾ ಅವರಿಗೆ ಬೆಂಬಲ ವ್ಯಕ್ತಪಡಿಸಿದರು. ಇದೇ ವೇಳೆ ಸುಮಲತಾ ಅಂಬರೀಶ್ ಅವರಿಗೆ ಪುತ್ರ ಅಭಿಶೇಕ್, ಅಂಬರೀಶ್ ಅಣ್ಣನ ಮಗ ದಯಾನಂದ್, ನಟ ದೊಡ್ಡಣ್ಣ, ನಟ ಯಶ್, ರಾಕ್‍ಲೈನ್ ವೆಂಕಟೇಶ್ ಸೇರಿದಂತೆ ನೂರಾರು ಅಭಿಮಾನಿಗಳು, ಕಾರ್ಯಕರ್ತರು ಜೊತೆಗಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
