ಬೆಂಗಳೂರು:
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಫರ್ಧಿಸುತ್ತಿರುವ ಸಮಲತ ಅಂಬರೀಷ್ ಮಾಜಿ ಮುಖ್ಯಮಂತ್ರಿ ಹಾಗು ಬಿಜೆಪಿ ನಾಯಕ ಎಸ್ ಎಂ ಕೃಷ್ಣರನ್ನು ಭೇಟಿ ಮಾಡಿ ಬೆಂಬಲ ಕೋರಿದ್ದಾರೆ.
ಸದಾಶಿವನಗರದಲ್ಲಿರುವ ಎಸ್.ಎಂ.ಕೃಷ್ಣ ನಿವಾಸಕ್ಕೆ ಆಗಮಿಸಿದ ಸುಮಲತಾ ಅರ್ಧಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿ ತಮಗೆ ಬೆಂಬಲ ನೀಡಬೇಕೆಂದು ಕೋರಿದ್ದಾರೆ.
ಸುಮಲತಾ ಅವರ ಮನವಿಗೆ ಸ್ಪಂದಿಸಿರುವ ಎಸ್.ಎಂ.ಕೃಷ್ಣ, ನಾನು ಬಿಜೆಪಿ ಅಭ್ಯರ್ಥಿಗಳ ಪರ ಸಕ್ರಿಯವಾಗಿ ಪ್ರಚಾರ ನಡೆಸಿ ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡಲು ನನ್ನದೇ ಆದ ಕಿರು ಸೇವೆಯನ್ನು ಸಲ್ಲಿಸಬೇಕೆಂದು ತೀರ್ಮಾನಿಸಿದ್ದೇನೆ. ಅಗತ್ಯ ಕಂಡುಬಂದರೆ ಮಂಡ್ಯ ಜಿಲ್ಲೆಗೂ ಬಂದು ನಿಮ್ಮ ಪರವಾಗಿ ಪ್ರಚಾರ ಮಾಡುತ್ತೇನೆ. ನನ್ನ ಬೆಂಬಲಿಗರಿಗೂ ಸುಮಲತಾ ಪರ ನಿಲ್ಲುವಂತೆ ಮನವಿ ಮಾಡುವುದಾಗಿ ಆಶ್ವಾಸನೆ ಕೊಟ್ಟಿದ್ದಾರೆ.
ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವೇರುತ್ತಿದೆ. ಎಲೆಕ್ಷನ್ ಹತ್ತಿರ ಬರುತ್ತಿದ್ದಂತೆಯೇ ರಾಜಕೀಯ ನಾಯಕರು ಟಿಕೆಟ್ ಹಂಚಿಕೆ, ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ.
ಇತ್ತ ಸುಮಲತಾ ಅಂಬರೀಶ್ ಅವರು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾಗುವ ಮೂಲಕ ಕುತೂಹಲ ಮೂಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
