ಬೆಂಗಳೂರು:
ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆವರೆಗೆ ಕರ್ನಾಟಕ ಕಂಪ್ಲೀಟ್ ಬಂದ್ ಆಗಲಿದ್ದು ಅನಗತ್ಯವಾಗಿ ತಿರುಗಾಡುವವರ ವಾಹನ ವಶಕ್ಕೆ ಪಡೆದು, ಪೊಲೀಸರು ದಂಡ ವಿಧಿಸಲಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಇದನ್ನು ತಡೆಯುವ ಉದ್ದೇಶದಿಂದ ಪ್ರತಿದಿನ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಅಲ್ಲದೆ ಪ್ರತಿ ಭಾನುವಾರ ಲಾಕ್ಡೌನ್ ಜಾರಿ ಮಾಡಲಾಗಿದೆ. ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ರಾಜ್ಯದಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿಯಲ್ಲಿರುತ್ತದೆ.
ಲಾಕ್ ಡೌನ್ ಹಿನ್ನಲೆಯಲ್ಲಿ 33 ಗಂಟೆಗಳ ಕಾಲ ಪೊಲೀಸರು ಟೈಟ್ ಸೆಕ್ಯೂರಿಟಿ ಕೈಗೊಂಡಿದ್ದಾರೆ. ಅಂತರ್ ಜಿಲ್ಲೆ ಮತ್ತು ಅಂತರಾಜ್ಯ ಪ್ರಯಾಣಕ್ಕೆ ನಿರ್ಬಂಧ ಹೇರಲಾಗಿದೆ. ಬಸ್, ಆಟೋ, ಕ್ಯಾಬ್ ಸಂಚರಿಸಲ್ಲ. ಅಗತ್ಯ ಸೇವೆ ಹೊರತಾದ ವಾಹನಗಳ ಸಂಚಾರಕ್ಕೆ ನಿರ್ಬಂಧವಿದೆ. ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆವರೆಗೆ ಕರ್ನಾಟಕ ಕಂಪ್ಲೀಟ್ ಬಂದ್ ಆಗಲಿದೆ. ಪೊಲೀಸರು ಟೈಟ್ ಸೆಕ್ಯೂರಿಟಿ ಕೈಗೊಂಡಿದ್ದು, ಅನಗತ್ಯವಾಗಿ ತಿರುಗಾಡುವವರಿಗೆ ಬಿಸಿ ಮುಟ್ಟಿಸಲಿದ್ದಾರೆ. ವಾಹನ ವಶಕ್ಕೆ ಪಡೆಯುವ ಜೊತೆಗೆ ದಂಡ ವಿಧಿಸಲು ಮುಂದಾಗಿದ್ದಾರೆ.
ಅಂತರ್ ಜಿಲ್ಲೆ ಮತ್ತು ಅಂತರಾಜ್ಯ ಪ್ರಯಾಣಕ್ಕೆ ನಿರ್ಬಂಧ ಹೇರಲಾಗಿದೆ. ಬಸ್, ಆಟೋ, ಕ್ಯಾಬ್ ಸಂಚರಿಸಲ್ಲ. ದೂರದ ಊರುಗಳಿಗೆ ಹೋಗಬೇಕಾದವರು ಪ್ರಯಾಣವನ್ನು ಮುಂದೂಡುವುದು ಒಳ್ಳೆಯದು.
ಸರಕು ಸಾಗಣಿ ಮತ್ತು ತುರ್ತು ಸೇವೆ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶವಿರಲಿದ್ದು, ಅಗತ್ಯ ಸೇವೆ ಹೊರತಾದ ವಾಹನಗಳ ಸಂಚಾರಕ್ಕೆ ನಿರ್ಬಂಧವಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
