ನವದೆಹಲಿ:
ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದುಪಡಿಸುವಂತೆ ಕೋರಿ ಬೆಳಗಾವಿಯ ರಾಜಶ್ರೀ ಸಲ್ಲಿಸಿದ್ದ ವಿಶೇಷ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.
ಕರೊನಾ ವೈರಸ್ ಆತಂಕ ಇರುವ ಹಿನ್ನೆಲೆಯಲ್ಲಿ 25ರಿಂದ ಕರ್ನಾಟಕದಲ್ಲಿ ನಡೆಯಬೇಕಿರುವ ಪರೀಕ್ಷೆಯನ್ನು ರದ್ದು ಮಾಡುವಂತೆ ಬೆಳಗಾವಿಯ ರಾಜಶ್ರೀ ಎಂಬುವವರು ಕೋರಿದ್ದರು. ಮಕ್ಕಳು ಭಯದ ವಾತಾವರಣದಲ್ಲಿ ಪರೀಕ್ಷೆ ಬರೆಯುವ ಪರಿಸ್ಥಿತಿ ಬರುತ್ತದೆ. ಇದು ಸರಿಯಲ್ಲ. ಇದಾಗಲೇ ಕೆಲವು ರಾಜ್ಯಗಳಲ್ಲಿ ಪರೀಕ್ಷೆ ರದ್ದು ಮಾಡಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ರದ್ದಾಗಬೇಕಿದೆ ಎಂದು ಅವರು ತಿಳಿಸಿದ್ದರು.
ಆದರೆ ಈ ಅರ್ಜಿಯನ್ನು ಮಾನ್ಯ ಮಾಡಲು ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್ ನೇತೃತ್ವದ ಪೀಠ ನಿರಾಕರಿಸಿದೆ.
ಈ ಮೂಲಕ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಹಾದಿ ಸುಗಮವಾಗಿದ್ದು, ಪರೀಕ್ಷೆಯು ನಿಗದಿತ ವೇಳೆಯಲ್ಲಿಯೇ ನಡೆಯಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ