ಬಿಎಸ್‍ವೈ ಮೇಲಿದ್ದ 5 ಡಿನೋಟಿಫಿಕೇಷನ್ ಕೇಸ್ ಗಳು ವಜಾ!

ಬೆಂಗಳೂರು:

      ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇತ್ಯರ್ಥ ಪಡಿಸಿ, ಯಡಿಯೂರಪ್ಪ ವಿರುದ್ಧದ 5 ಕೇಸುಗಳನ್ನು ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ನೀಡಿದೆ.

     ಮಂಗಳವಾರ ಸುಪ್ರೀಂಕೋರ್ಟ್ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ 5 ಪ್ರಕರಣಗಳನ್ನು ವಜಾಗೊಳಿಸಿದೆ. ಇದರಿಂದಾಗಿ ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

      ಯಡಿಯೂರಪ್ಪ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಶಿವಮೊಗ್ಗ ಮೂಲದ ವಕೀಲ ಸಿರಾಜಿನ್ ಪಾಷಾ 5 ಕೇಸುಗಳನ್ನು ದಾಖಲಿಸಿದ್ದರು. ಈ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ಕಾನೂನು ಹೋರಾಟ ನಡೆಸುತ್ತಿದ್ದರು.

      ಯಡಿಯೂರಪ್ಪ ಹಾಗೂ ಕುಟುಂಬ ಸದಸ್ಯರ ವಿರುದ್ಧ ಡಿನೋಟಿಫಿಕೇಷನ್ ಸೇರಿದಂತೆ ವಿವಿಧ ಪ್ರಕರಣಗಳು ಬಾಕಿ ಇದ್ದವು. ಹಲವಾರು ವರ್ಷಗಳಿಂದ ಈ ಪ್ರಕರಣಗಳ ವಿಚಾರಣೆ ನಡೆಯುತ್ತಿತ್ತು. ಇಂದು ಪ್ರಕರಣಗಳನ್ನು ವಜಾಗೊಳಿಸಿ ಕೋರ್ಟ್ ಆದೇಶ ನೀಡಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link