ದೆಹಲಿ :
ಕರ್ನಾಟಕದ 15 ಕ್ಷೇತ್ರಗಳ ಉಪಚುನಾವಣೆಗೆ ತಡೆ ನೀಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ನಿನ್ನೆ ಅನರ್ಹರ ಪರ ವಕೀಲ ಮುಕುಲ್ ರೋಹ್ಟಗಿ ಹಾಗೂ ಸ್ಪೀಕರ್ ಪರ ವಕೀಲ ತುಷಾರ್ ಮೆಹ್ತಾರ ವಾದ ಪ್ರತಿವಾದ ಆಲಿಸಿ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠ, ಇಂದಿಗೆ ವಿಚಾರಣೆ ಮುಂದೂಡಿತ್ತು.
ಕಾಂಗ್ರೆಸ್-ಜೆಡಿಎಸ್ ಪಕ್ಷದ 17 ಅನರ್ಹ ಶಾಸಕರ ಪ್ರಕರಣದ ಕುರಿತಾದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಕೈಗೆತ್ತುಕೊಂಡಿದ್ದು, 15 ಕ್ಷೇತ್ರಗಳ ಉಪ ಚುನಾವಣೆಗೆ ತಡೆ ನೀಡಿದೆ.
ಈಗಾಗಲೇ ಕರ್ನಾಟಕ ಉಪ ಚುನಾವಣೆಗೆ ಚುನಾವಣಾ ಆಯೋಗ ಅಕ್ಟೋಬರ್ 21 ರಂದು ದಿನಾಂಕ ನಿಗಧಿ ಮಾಡಿದ್ದು, ಸೆಪ್ಟೆಂಬರ್.30 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿ ಘೋಷಿಸಿತ್ತು.
ಈಗ ಅಕ್ಟೋಬರ್ 22 ರಂದು ಮತ್ತೆ ವಿಚಾರಣೆಯನ್ನು ಮುಂದೂಡಲಾಗಿದ್ದು, ನ್ಯಾಯಾಲಯದ ಮುಂದಿನ ಆದೇಶ ಬರುವವರೆಗೆ 15ಕ್ಷೇತ್ರಗಳಿಗೆ ಚುನಾವಣೆ ಇಲ್ಲ ಎನ್ನಲಾಗಿದೆ .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ