ಅನರ್ಹ ಶಾಸಕರ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ!!

ನವದೆಹಲಿ:

      ಅನರ್ಹಗೊಂಡಿರುವ ಶಾಸಕರ ಅರ್ಜಿ ಕುರಿತು ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

      ಸ್ಪೀಕರ್​ ರಮೇಶ್​ ಕುಮಾರ್​ ರವರು ರಾಜೀನಾಮೆ ನೀಡಿದ ಎಲ್ಲ 17 ಶಾಸಕರನ್ನು ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಅನರ್ಹ ಮಾಡಿ ಆದೇಶ ಹೊರಡಿಸಿದ್ದರು.

      ಸ್ಪೀಕರ್​ ರಮೇಶ್ ಕುಮಾರ್​ ಆದೇಶ ಪ್ರಶ್ನಿಸಿ, ಎಲ್ಲ 17 ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಸುಪ್ರೀಂಕೋರ್ಟ್​ ಇವರ ಅರ್ಜಿಯನ್ನ ಕೈಗೆತ್ತಿಕೊಂಡಿರಲಿಲ್ಲ. ರಾಜ ಜನ್ಮ ಭೂಮಿ ವಿವಾದದ ಕುರಿತ ವಿಚಾರಣೆ ಪ್ರತಿದಿನ ನಡೆಯುತ್ತಿದ್ದು, ಪ್ರಸ್ತುತ ಅನರ್ಹ ಶಾಸಕರ ಅರ್ಜಿ ಕುರಿತು ತುರ್ತು ವಿಚಾರಣೆ ಸಾಧ್ಯವಿಲ್ಲ. ಆದರೆ, ಶೀಘ್ರದಲ್ಲಿ ವಿಚಾರಣಾ ದಿನಾಂಕವನ್ನು ತಿಳಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

      ಈ ಹಿನ್ನೆಲೆಯಲ್ಲಿ ಎಲ್ಲ 17 ಅನರ್ಹ ಶಾಸಕರು, ಈ ಅರ್ಜಿಯ ವಿಚಾರಣೆಯನ್ನು ತ್ವರಿತವಾಗಿ ಕೈಗೆತ್ತಿಕೊಳ್ಳುವಂತೆ ಇಂದು ಸುಪ್ರೀಂಕೋರ್ಟ್​ಗೆ ಮನವಿ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap