ನವದೆಹಲಿ:
ಅನರ್ಹಗೊಂಡಿರುವ ಶಾಸಕರ ಅರ್ಜಿ ಕುರಿತು ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ಸ್ಪೀಕರ್ ರಮೇಶ್ ಕುಮಾರ್ ರವರು ರಾಜೀನಾಮೆ ನೀಡಿದ ಎಲ್ಲ 17 ಶಾಸಕರನ್ನು ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಅನರ್ಹ ಮಾಡಿ ಆದೇಶ ಹೊರಡಿಸಿದ್ದರು.
ಸ್ಪೀಕರ್ ರಮೇಶ್ ಕುಮಾರ್ ಆದೇಶ ಪ್ರಶ್ನಿಸಿ, ಎಲ್ಲ 17 ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಸುಪ್ರೀಂಕೋರ್ಟ್ ಇವರ ಅರ್ಜಿಯನ್ನ ಕೈಗೆತ್ತಿಕೊಂಡಿರಲಿಲ್ಲ. ರಾಜ ಜನ್ಮ ಭೂಮಿ ವಿವಾದದ ಕುರಿತ ವಿಚಾರಣೆ ಪ್ರತಿದಿನ ನಡೆಯುತ್ತಿದ್ದು, ಪ್ರಸ್ತುತ ಅನರ್ಹ ಶಾಸಕರ ಅರ್ಜಿ ಕುರಿತು ತುರ್ತು ವಿಚಾರಣೆ ಸಾಧ್ಯವಿಲ್ಲ. ಆದರೆ, ಶೀಘ್ರದಲ್ಲಿ ವಿಚಾರಣಾ ದಿನಾಂಕವನ್ನು ತಿಳಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಎಲ್ಲ 17 ಅನರ್ಹ ಶಾಸಕರು, ಈ ಅರ್ಜಿಯ ವಿಚಾರಣೆಯನ್ನು ತ್ವರಿತವಾಗಿ ಕೈಗೆತ್ತಿಕೊಳ್ಳುವಂತೆ ಇಂದು ಸುಪ್ರೀಂಕೋರ್ಟ್ಗೆ ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ