ಬೆಂಗಳೂರು :
ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ, ಪತ್ರಕರ್ತ ಸುರೇಶ್ ಚಂದ್ರ(69) ಕೊರೊನಾ ಸೋಂಕಿಗೆ ಒಳಗಾಗಿ ಇಂದು ವಿಧಿವಶರಾಗಿದ್ದಾರೆ.
ಕೊರೊನಾ ಸೋಂಕಿಗೆ ಒಳಗಾಗಿದ್ದ ಅವರನ್ನು ನಗರದ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ.
80ರ ದಶಕದಿಂದ ಸಿನಿಮಾ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸಿದ್ದ ಸುರೇಶ್ ಚಂದ್ರ 50ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು.
ಕನ್ನಡ ಚಿತ್ರರಂಗದ ದಿಗ್ಗಜ ನಟರಾದ ಶಂಕರ್ ನಾಗ್, ವಿಷ್ಣು ವರ್ಧನ್, ಅಂಬರೀಶ್ ಅವರೊಂದಿಗೆ ಆತ್ಮೀಯ ಒಡನಾಟಹೊಂದಿದ್ದ ಸುರೇಶ್ ಚಂದ್ರ, ಎಸ್. ನಾರಾಯಣ್ ನಿರ್ದೇಶನದ ಚೆಲುವಿನ ಚಿತ್ತಾರ ಸಿನಿಮಾದಲ್ಲಿ ಪೋಷಕ ಪಾತ್ರದಲ್ಲಿ ಅಭಿನಯಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ