ಶಾಲೆ-ಕಾಲೇಜು ಪ್ರಾರಂಭ ಮಾಡುವ ಯೋಚನೆ ಸದ್ಯಕ್ಕಿಲ್ಲ!!

ಬೆಂಗಳೂರು:

    ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

      ಅಕ್ಟೋಬರ್​ನಲ್ಲಿ ಶಾಲೆ-ಕಾಲೇಜು ಆರಂಭವಾಗುತ್ತಾ? ಅನ್ನೋ ಪ್ರಶ್ನೆಗೆ ಇದೀಗ ಶಿಕ್ಷಣ ಸಚಿವರೇ ಸ್ಪಷ್ಟನೆ ನೀಡಿದ್ದಾರೆ.

     ಶಾಲೆ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ‌ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭಿಸುವ ಯೋಚನೆಯು ಕೂಡ ಸರ್ಕಾರದ ಮುಂದೆ ಇಲ್ಲ. ಈ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ. ಇದರ ಬಗ್ಗೆ ಸಾಕಷ್ಟು ಚರ್ಚೆ, ಅಭಿಪ್ರಾಯ ಸಂಗ್ರಹ, ಪೋಷಕರ ಸಲಹೆ ಎಲ್ಲವನ್ನು ಪಡೆಯಬೇಕಿದೆ. ಅಲ್ಲಿಯವರೆಗೆ ರಾಜ್ಯದ ಶಾಲೆ-ಕಾಲೇಜು ಪ್ರಾರಂಭಿಸುವ ದಿನಾಂಕದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸಚಿವ ಸುರೇಶ್​ಕುಮಾರ್​ ಸ್ಪಷ್ಟಪಡಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap