ದೆಹಲಿ:
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಘೋಷಿಸಿದ್ದಾರೆ.
ತಮ್ಮ ಅನಾರೋಗ್ಯದ ಹಿನ್ನೆಲೆಯಲ್ಲಿ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲು ನಿರ್ಧರಿಸಿರುವುದಾಗಿ ಅವರು ತಿಳಿಸಿದರು.
ಸೋಮವಾರ ಬಿಜೆಪಿ ಪತ್ರಿಕಾಗೋಷ್ಠಿಯಲ್ಲಿ ತಮ್ಮ ನಿರ್ಧಾರ ಪ್ರಕಟಿಸಿದ ಸುಷ್ಮಾ ಅವರು,‘ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಬಾರದೆಂಬುದು ನನ್ನ ಮನಸ್ಸಿನ ಭಾವನೆ’ ಎಂದು 66 ವಯಸ್ಸಿನ ಸುಷ್ಮಾ ಸ್ವರಾಜ್ ಅವರು ಹೇಳಿದ್ದಾರೆ.
‘ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಾನು ನಿರ್ಧರಿಸಿದ್ದೇನೆ. ಈ ವಿಚಾರದಲ್ಲಿ ಪಕ್ಷ ಅಂತಿಮ ತೀರ್ಮಾನ ಕೈಗೊಳ್ಳಲಿದೆ’ ಎಂದು ತಿಳಿಸಿದರು.
ಎಳು ಬಾರಿ ಸಂಸತ್ತಿಗೆ ಆಯ್ಕೆಯಾಗಿರುವ ಸುಷ್ಮಾ ಅತ್ಯುನ್ನತ ವಿದೇಶಾಂಗ ವ್ಯವಹಾರಗಳ ಸಚಿವಾಲಯವನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಬಂದಿದ್ದಾರೆ. ಇನ್ನು 1998ರ ಅಕ್ಟೊಬರ 13ರಿಂದ ಡಿಸೆಂಬರ್ 3ರವರೆಗೆ ದೆಹಲಿಯ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದರು. ಅದರೊಂದಿಗೆ ದೆಹಲಿಯ ಮೊದಲ ಮಹಿಳಾ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ