ಬೆಂಗಳೂರು:

ನಗರದ ಸಂಗೋಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂ ನಂಬರ್ 1 ರಲ್ಲಿ ಕಂಟ್ರಿಮೇಡ್ ಗ್ರೆನೇಡ್ ಕಂಡು ಪ್ರಯಾಣಿಕರು ಬೆಚ್ಚಿ ಬಿದ್ದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಬೆಳಗ್ಗೆ 9 ಗಂಟೆ ಸುಮಾರಿಗೆ ಸಾರ್ವಜನಿಕರು ನೀಡಿದ ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿದ ರೈಲ್ವೆ ಭದ್ರತಾ ಪಡೆ, ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬಂದಿಗಳು ಆಗಮಿಸಿ ಗ್ರೆನೇಡ್ ಮೇಲೆ ಮರಳಿನ ಚೀಲಗಳನ್ನು ಹಾಕಿ ಮುನ್ನೆಚ್ಚರಿಕೆ ವಹಿಸಿದರು.

ನಿಲ್ದಾಣದ ಫ್ಲಾಟ್ ಫಾರಂನಲ್ಲಿದ್ದ ಪ್ರಯಾಣಿಕರನ್ನು ಹೊರಗೆ ಕಳುಹಿಸಲಾಗಿದ್ದು, ತಪಾಸಣೆ ನಡೆಸಲಾಗುತ್ತಿದೆ. ಕೆಲ ರೈಲುಗಳ ಸಂಚಾರ ವಿಳಂಬವಾಗುವ ಸಾಧ್ಯೆಗಳಿವೆ. ರೈಲುಗಳ ಬೋಗಿಗಳು, ಪ್ರಯಾಣಿಕರ ಬ್ಯಾಗ್‌ಗಳ ಪರಿಶೀಲನೆ ಮುಂದುವರಿದಿದ್ದು, ಸಿಸಿಟಿವಿ ದೃಶ್ಯಾಳಿಗಳನ್ನೂ ಪರಿಶೀಲಿಸಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ರೈಲಿನಲ್ಲಿ ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಶೋಧ ನಡೆಸಿದರು.
ಗ್ರೆನೇಡ್ ಕಂಡು ಪ್ರಯಾಣಿಕರು ರೈಲ್ವೆ ಸಿಬಂದಿಗೆ ತಿಳಿಸಿದ್ದಾರೆ. ಕೆಲ ಪ್ರಯಾಣಿಕರು ಸ್ಥಳದಿಂದ ದಿಕ್ಕಾಪಾಲಾಗಿ ಓಡಲು ಆರಂಭಿಸಿದ್ದಾರೆ. ಸದ್ಯಕ್ಕೆ ಯಾವುದೇ ಅಪಾಯವಿಲ್ಲ. ತನಿಖೆ ನಡೆಸುತ್ತಿದ್ದೇವೆ ಎಂದು ರೈಲ್ವೆಎಡಿಜಿ ಅಲೋಕ್ ಮೋಹನ್ ಹೇಳಿಕೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








