ಬೆಂಗಳೂರು:
ಬೈಕ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಇನ್ನೋವಾ ಕಾರು ಎರಡು ಬಾರಿ ಪಲ್ಟಿ ಹೊಡೆದ ಪರಿಣಾಮ ಒಂಬತ್ತು ತಿಂಗಳ ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಪಾಳ್ಯ ಗೇಟ್ ಬಳಿ ನಡೆದಿದೆ.
ಯಲಹಂಕದ ಶಿವಕೋಟೆ ಗ್ರಾಮದ ಪಾರ್ವತಮ್ಮ (30), ನಾಗಮ್ಮ, ಪಲ್ಸರ್ ಬೈಕ್ ಸವಾರ ಶಶಿಕುಮಾರ್ (35) ಹಾಗೂ 9 ತಿಂಗಳ ಮಗು ಮೃತ ದುರ್ದೈವಿಗಳು.
ಅಪಘಾತ ನಿನ್ನೆ ಸಂಜೆ 4.30ರ ಸುಮಾರಿಗೆ ನಡೆದಿದ್ದು, ಪಲ್ಸರ್ ಬೈಕ್ ಇನ್ನೋವಾ ಕಾರಿನ ಎದುರುಗಡೆ ಬಂದಿತ್ತು, ಕಾರು ಚಾಲಕ ತಕ್ಷಣ ಬ್ರೇಕ್ ಹಾಕಿ ನಿಲ್ಲಿಸಿದ್ದ, ತಕ್ಷಣವೇ ಹಿಂದಿದ್ದ ಎಸ್‌ಯುವಿ ಬೈಕಿಗೆ ಗುದ್ದಿದೆ, ಬಳಿಕ ಬ್ಯಾರಿಕೇಡ್‌ಗೆ ಗುದ್ದಿ ಎರಡು ಬಾರಿ ಪಲ್ಟಿಯಾಗಿದೆ. ಕಾರಿನಲ್ಲಿದ್ದವರು ಯಲಹಂಕದಲ್ಲಿ ಬೀಗರ ಊಟ ಮುಗಿಸಿಕೊಂಡು ಹಿಂದಿರುಗುತ್ತಿದ್ದರು ಎನ್ನಲಾಗಿದೆ.
ಇನ್ನೋವಾ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ಮಾರ್ಗದಲ್ಲಿ ನಡೆದಿದ್ದು, ಸುಮಾರು ಅರ್ಧಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ತಕ್ಷಣವೇ ಟ್ರಾಫಿಕ್ ಪೊಲೀಸರು ಬಂದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಪರದಾಡುವಂತಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ