ಉಡುಪಿ:
ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಅವಘಡದಲ್ಲಿ ನಾಪತ್ತೆಯಾದ ಸಹೋದರನ ಚಿಂತೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಭಟ್ಕಳ ನಿವಾಸಿ ಚಂದ್ರಶೇಖರ್ ಮೊಗೇರ (30) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೀನುಗಾರಿಕೆಗೆ ತೆರಳಿ ನಾಪತ್ತೆಯಾದ ಮೀನುಗಾರರಲ್ಲಿ ಓರ್ವನಾದ ಭಟ್ಕಳದ ನಿವಾಸಿ ರಮೇಶ್ ಮೊಗೇರ ಅವರ ಸಹೋದರ ಚಂದ್ರಶೇಖರ್ ನಾಲ್ಕು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆರೋಗ್ಯ ತೀವ್ರ ಹದಗೆಟ್ಟ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಗುರುವಾರ ಬೆಳಗ್ಗೆ 10:30 ಕ್ಕೆ ಚಿಕಿತ್ಸೆ ಫಲಿಸದೆ ಚಂದ್ರಶೇಖರ್ ಮೃತಪಟ್ಟಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ