ತುಮಕೂರು :
ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಸಂಜೆ 4ಗಂಟೆಯವರಗೆ ಮಾತ್ರ ವ್ಯವಸ್ಥೆ ಮಾಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳ ಕ್ರಿಯಾ ವಿಧಾನವನ್ನು ಹೇಗೆ ಮಾಡೋದು ಎನ್ನುವುದರ ಕುರಿತು ಕಿರಿಯ ಶ್ರೀ ಮತ್ತು ಸುತ್ತೂರು ಶ್ರೀಗಳೊಂದಿಗೆ ನಾನು ಮತ್ತು ಗೃಹ ಸಚಿವ ಎಂ.ಬಿ.ಪಾಟೀಲ್ ಸೇರಿ ಚರ್ಚಿಸಿದ್ದೇವೆ. ಎಲ್ಲಿಯವರೆಗೆ ಸಾಧ್ಯವೋ ಅಲ್ಲಿವರೆಗೆ ಅವರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಎಲ್ಲರೂ ಅಂತಿಮ ಸಂಸ್ಕಾರಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಸಂಜೆ 4 ಗಂಟೆಯ ನಂತರ ಶ್ರೀಗಳ ಪಾರ್ಥೀವ ಶರೀರವನ್ನು ಮಠದ ಗದ್ದುಗೆಗೆ ತೆಗೆದುಕೊಂಡು ಹೋಗಲಾಗುತ್ತದೆ. ಅಲ್ಲಿ ಶ್ರೀಗಳ ಅಂತಿಮ ವಿಧಿ ವಿಧಾನಗಳು ನಡೆಯಲಿವೆ. ಸಂಜೆ 5 ಗಂಟೆ ಮೇಲೆ ನಡೆಯಲಿರುವ ಕಾರ್ಯಗಳನ್ನು ಮಾಧ್ಯಮಗಳು ಮತ್ತು ಮಠದಲ್ಲಿ ಅಳವಡಿಸಿರುವ ದೊಡ್ಡ ಸ್ಕ್ರೀನ್ ಮೂಲಕ ನೋಡಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಭಕ್ತರು ಹಾಗೂ ಸಾರ್ವಜನಿಕರು ವೀಕ್ಷಣೆ ಮಾಡಬಹುದು ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ