ತುಮಕೂರು:
ತಮಿಳುನಾಡಿನ ರಾಜಧಾನಿ ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ಧಗಂಗಾ ಮಠದ ಹಿರಿಯ ಶ್ರೀ ಡಾ.ಶಿವಕುಮಾರ ಸ್ವಾಮಿಗಳು ಇಂದು ಮಠಕ್ಕೆ ಮರಳಲಿದ್ದಾರೆ.
ಪಿತ್ತಕೋಶದ ಸೋಂಕು ಉಂಟಾಗಿದ್ದ ಕಾರಣ ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಯವರು ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿದ್ದು, ಬುಧವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಚೆನ್ನೈನಿಂದ ಏರ್ ಆಂಬ್ಯುಲೆನ್ಸ್ ಮೂಲಕ ತುಮಕೂರಿಗೆ ತೆರಳಲಿದ್ದಾರೆ ಎನ್ನವು ಮಾಹಿತಿ ಲಭ್ಯವಾಗಿದೆ.
ಇಂದು ಚೈನ್ನೈನಿಂದ ಬೆಂಗಳೂರು ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಏರ್ ಆ್ಯಂಬುಲೆನ್ಸ್ ನಲ್ಲಿ ಬರಲಿದ್ದು, ಅಲ್ಲಿಂದ ಮಧ್ಯಾಹ್ನ 12 ಗಂಟೆಗೆ ಮಠಕ್ಕೆ ಕಾರಿನಲ್ಲಿ ಬರಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
