ಹಾಸನ:
ಬಾಳೆಹೊನ್ನೂರು ಶಾಖಾ ಮಠದ ಸ್ವಾಮೀಜಿಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಆಲೂರು ತಾಲೂಕಿನ ಕಾರ್ಜುವಳ್ಳಿ ಮಠದ ಶ್ರೀ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ(39) ಮೃತರು. ಮಂಗಳವಾರ ರಾತ್ರಿ ತಮ್ಮ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬುಧವಾರ ಬೆಳಗ್ಗೆ ಕೋಣೆಯತ್ತ ತೆರಳಿದ ವ್ಯಕ್ತಿಯೊಬ್ಬ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಆತ್ಮಹತ್ಯೆ ಕಾರಣ ನಿಗೂಢವಾಗಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಆಲೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶ್ರೀಗಳ ಸಾವಿನ ಸುದ್ದಿ ತಿಳಿದು ಭಕ್ತರು ಆತಂಕಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ