ಬಿಎಸ್.ವೈ. ಕನಸಿನ ಮನೆಯನ್ನು ಬಿಟ್ಟುಕೊಟ್ಟ ಸಿದ್ದರಾಮಯ್ಯ!!

ಬೆಂಗಳೂರು :

     ಸಾಕಷ್ಟು ಹಗ್ಗಜಗ್ಗಾಟದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಕಾವೇರಿ ನಿವಾಸವನ್ನು ಬಿಟ್ಟುಕೊಟ್ಟು ತಾವು ಹೊಸ ಬಂಗಲೆಗೆ ಶಿಫ್ಟ್ ಆಗಿದ್ದಾರೆ.

      ಸಿದ್ದರಾಮಯ್ಯ ಈ ಹಿಂದೆ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿಕೊಂಡ ನಂತರ ಮುಖ್ಯಮಂತ್ರಿಗಳ ಅಧಿಕೃತ ನಿವಾಸವಾದ ಕಾವೇರಿಯಲ್ಲಿ ವಾಸ್ತವ್ಯ ಹೂಡಿದ್ದರು. ಆದರೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿ ಸಿಎಂ ಸ್ಥಾನ ಕಳೆದುಕೊಂಡ ನಂತರವೂ ಅವರು ಅದೇ ಮನೆಯಲ್ಲಿ ವಾಸವಿದ್ದರು.

     ಈ ಮನೆಯಲ್ಲಿ ವಾಸ್ತವ್ಯ ಹೂಡಲು ಮುಖ್ಯಮಂತ್ರಿ ಬಿಎಸ್​ವೈ ಅವರ ಒಲವಿತ್ತು ಆದರೆ ಸಿದ್ದರಾಮಯ್ಯ ಅವರು ಮನೆ ಖಾಲಿ ಮಾಡಿರಲಿಲ್ಲ ಎಂಬ ಕಾರಣಕ್ಕೆ ಬಿಎಸ್​ವೈ ಅವರು ಡಾಲರ್ಸ್​​ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿಯೇ ವಾಸವಿದ್ದರು. 

      ಹೀಗಾಗಿ ಸಿದ್ದರಾಮಯ್ಯ ಆ ಮನೆಯನ್ನು ಕೂಡಲೇ ಖಾಲಿ ಮಾಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದರು. ಆದರೆ, ಮನೆ ಖಾಲಿ ಮಾಡಲು ಒಪ್ಪದ ಸಿದ್ದರಾಮಯ್ಯ ಆ ಮನೆಯನ್ನು ಮತ್ತೆ ತನಗೆ ಮಂಜೂರು ಮಾಡುವಂತೆ ಪಟ್ಟುಹಿಡಿದಿದ್ದರು. ಆದರೆ, ಸರ್ಕಾರಿ ಇದಕ್ಕೆ ನಿರಾಕರಿಸಿತ್ತು. 

     ಈಗ ಮನೆ ಖಾಲಿ ಮಾಡಲು ಮನಸ್ಸು ಮಾಡಿರುವ ಸಿದ್ದರಾಮಯ್ಯ ಅವರು, ಇಂದು ಕಾವೇರಿ ನಿವಾಸವನ್ನು ತೆರವುಗೊಳಿಸಿ ಇದೀಗ ಗಾಂಧಿ ಭವನದ ಹಿಂಭಾಗದಲ್ಲಿರುವ ಹೊಸ ಮನೆ ಪ್ರವೇಶಿಸಿದ್ದಾರೆ. ಕೊನೆಗೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅಂದುಕೊಂಡಂತೆ ಅವರು ಬಹಳ ಇಷ್ಟಪಟ್ಟಿದ್ದ ಕನಸಿನ ಮನೆಯನ್ನು ಬಿಟ್ಟು ಕೊಟ್ಟಂತಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ