ಬೆಂಗಳೂರು :
ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಸೆಪ್ಟೆಂಬರ್ 30ರಿಂದ ಪುನರಾರಂಭ ಮಾಡಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ.
ಕಳೆದ 3 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಈ ಬಾರಿ ಆರಂಭವಾಗಿತ್ತಾದರೂ ಕುಂಟುತ್ತಾ ಎಡವುತ್ತಾ ಸಾಗಿತ್ತು. ವರ್ಗಾವಣೆ ಪ್ರಕ್ರಿಯೆ ನಡೆದಿರುವುದರ ಮಧ್ಯೆ ಉಪ ಚುನಾವಣೆ ಘೋಷಣೆಯಾದ ಕಾರಣ ನೀತಿ ಸಂಹಿತೆ ಕಾರಣಕ್ಕೆ ಮತ್ತೆ ಸ್ಥಗಿತಗೊಂಡಿತ್ತು.
ಇದೀಗ ಉಪ ಚುನಾವಣೆ ಮುಂದೂಡಿಕೆಯಾಗಿದ್ದು, ನೀತಿ ಸಂಹಿತೆ ಚಾಲ್ತಿಯಲ್ಲಿದ್ದ ಕಾರಣ ತಾತ್ಕಾಲಿಕವಾಗಿ ಶಿಕ್ಷಕರ ಕಡ್ಡಾಯ ವರ್ಗಾವಣೆ ಪ್ರಕ್ರಿಯೆ ನಿಲ್ಲಿಸಲಾಗಿತ್ತು. ಇದೀಗ ಉಪಚುನಾವಣೆ ಡಿಸೆಂಬರ್ 5ಕ್ಕೆ ಮುಂದೂಡಲಾಗಿದೆ. ಈ ಹಿನ್ನಲೆಯಲ್ಲಿ ಸೆಪ್ಟೆಂಬರ್ 30ರ ಸೋಮವಾರದಿಂದ ಪರಿಷ್ಕೃತ ವೇಳಾಪಟ್ಟಿಯಂತೆ ವರ್ಗಾವಣೆ ಕೌನ್ಸೆಲಿಂಗ್ ಪುನರಾರಂಭವಾಗಲಿದೆ.
ಅಕ್ಟೋಬರ್ ಕೊನೆಯ ವಾರದವರೆಗೂ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಲಾಗಿದ್ದು, ಪ್ರತಿದಿನ 300 ಮಂದಿಗೆ ವರ್ಗಾವಣೆ ಕೌನ್ಸೆಲಿಂಗ್ ನಡೆಯಲಿದೆ ಎನ್ನಲಾಗಿದೆ. ಅಂತಿಮ ಹಂತದಲ್ಲಿ ಘಟಕದ ಹೊರಗೆ ಮತ್ತು ಪರಸ್ಪರ ವರ್ಗಾವಣೆ ಪ್ರಕ್ರಿಯೆ ಮಾತ್ರ ನಡೆಯಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ