ಚಿಕ್ಕಬಳ್ಳಾಪುರ :
ರಾಜ್ಯದಲ್ಲಿ ಶೀಘ್ರವೇ 5 ಸಾವಿರ ಶಿಕ್ಷಕರನ್ನು ಟಿಇಟಿ ಮತ್ತು ಸಿಇಟಿ ಮೂಲಕ ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ.ನಾಗೇಶ್ ಅವರು, ರಾಜ್ಯದಲ್ಲಿ 13 ಸಾವಿರ ಶಿಕ್ಷಕರ ಕೊರತೆಯಿದೆ. ಅದನ್ನು ನೀಗಿಸುವ ಸಲುವಾಗಿ ಪ್ರಸಕ್ತ ಸಾಲಿನಲ್ಲಿ 5 ಸಾವಿರ ಶಿಕ್ಷಕರನ್ನು ನೇಮಕ ಮಾಡಲು ಸಿದ್ಧತೆ ಮಾಡಿಕೊಂಡಿದ್ದೇವೆ. ಟಿಇಟಿ-ಸಿಇಟಿ ಪರೀಕ್ಷೆಗಳ ಮೂಲಕ ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಇನ್ನು ರಾಜ್ಯದಲ್ಲಿ ಪ್ರಾಥಮಿಕ ಶಾಲೆ ಆರಂಭದ ಕುರಿತಂತೆ ಪ್ರತಿಕ್ರಿಯೆ ನೀಡಿದ ಸಚಿವರು, ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ನಿಟ್ಟಿನಲ್ಲಿ ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ. ಕೊರೊನಾ ನಿಯಂತ್ರಿಸಲು ರಚಿಸಿರುವ ತಜ್ಞರ ಸಮಿತಿಯ ಅಭಿಪ್ರಾಯವನ್ನು ಆಲಿಸಿ ತಜ್ಞರ ಸಮಿತಿಯ ವರದಿಯನ್ನು ಆಧರಿಸಿ ಪ್ರಾಥಮಿಕ ಶಾಲೆಗಳನ್ನು ತೆರೆಯಲು ನಿರ್ಣಯವನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
