ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ಟೆಂಪೋ : ಇಬ್ಬರ ದುರ್ಮರಣ!!

ಉಡುಪಿ :

     ಚಾಲಕನ ನಿಯಂತ್ರಣ ತಪ್ಪಿದ ಮಹೀಂದ್ರಾ ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ 66 ರ ಅಂಬಾಗಿಲು ಬಳಿ ನಡೆದಿದೆ.

      ಟೆಂಪೊ ಚಾಲಕ ಮತ್ತು ಕ್ಲೀನರ್ ದಿನೇಶ್(35) ಮಂಜು(30) ಮೃತ ದುರ್ವೈವಿಗಳು. ಇವರು ಉದ್ಯಾವರದಲ್ಲಿ ತರಕಾರಿ ವ್ಯಾಪಾರವನ್ನು ಮಾಡುತ್ತಿದ್ದರು. ಕುಂದಾಪುರದಿಂದ ಉದ್ಯಾವರಕ್ಕೆ ತರಕಾರಿ ತುಂಬಿಸಿಕೊಂಡು ಬರುತ್ತಿದ್ದ ವೇಳೆ ಟೆಂಪೋ ನಿದ್ದೆಗಣ್ಣಿನಿಂದ ನಿಯಂತ್ರಣ ತಪ್ಪಿದ ವಾಹನ ರಸ್ತೆ ಬದಿ ಹಾಕಲಾದ ಸೂಚನ ಫಲಕದ ಕಂಬಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಅಪಘಾತದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

      ದಿನೇಶ್‌ಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಮಂಜುನಾಥ್ ಅವಿವಾಹಿತರಾಗಿದ್ದಾರೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap