ಬೆಂಗಳೂರು:
ಬಗರ್ ಹುಕುಂ ಭೂಮಿ ಅಕ್ರಮ ಮಂಜೂರಾತಿ ಪ್ರಕರಣದಲ್ಲಿ ಎಸಿಬಿ ದಾಖಲಿಸಿದ್ದ ಎಫ್ ಐಆರ್ ಅನ್ನು ರದ್ದುಗೊಳಿಸಬೇಕೆಂದು ಕೋರಿ ಬಿಜೆಪಿ ಮಾಜಿ ಸಚಿವ, ಶಾಸಕ ಆರ್.ಅಶೋಕ್ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿರುವ ಹೈಕೋರ್ಟ್, ಎಸಿಬಿ ತನಿಖೆ ನಡೆಸಲು ಹಸಿರು ನಿಶಾನೆ ತೋರಿಸಿದೆ.
ಪ್ರಕರಣದ ಹಿನ್ನೆಲೆ:
ಈ ಹಿಂದೆ ಆರ್.ಅಶೋಕ್ ಶಾಸಕರಾಗಿದ್ದಾಗ ವೇಳೆಯಲ್ಲಿ ಬೆಂಗಳೂರಿನ ಉತ್ತರಹಳ್ಳಿ ಹೋಬಳಿಯ ಸೋಮನಹಳ್ಳಿ ಗ್ರಾಮದ ಸರ್ವೇ ಸಂಖ್ಯೆ 242ರಲ್ಲಿ ಮಾಜಿ ಮೇಯರ್ ಡಿ.ವೆಂಕಟೇಶಮೂರ್ತಿ ಹಾಗೂ ಅವರ ಪತ್ನಿ ಕೆ. ಪ್ರಭಾ ಅವರ ಹೆಸರಿನಲ್ಲಿ ನಾಲ್ಕು ಎಕರೆ ಜಮೀನನ್ನು ಕ್ಷೇತ್ರದ ಶಾಸಕರಾಗಿದ್ದ ಆರ್.ಅಶೋಕ ಅವರಿಂದ ಮಂಜೂರು ಆಗಿದೆ. ಎಂದು ಆರೋಪಿಸಲಾಗಿತ್ತು. ಅರ್ಜಿಯನ್ನು ಹೈಕೋರ್ಟ್ ನ ಏಕ ಸದ್ಯಸ ಪೀಠ ವಜಾ ಮಾಡಿದೆ.
ರಾಜಕೀಯ ದುರುದ್ದೇಶದಿಂದ ತನ್ನ ಮೇಲೆ ಸುಳ್ಳು ಆರೋಪ ಹೊರಿಸಿ ದೂರು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಎಸಿಬಿ ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಆರ್.ಅಶೋಕ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅರ್ಜಿಯನ್ನು ಹೈಕೋರ್ಟ್ ನ ಏಕ ಸದ್ಯಸ ಪೀಠ ವಜಾ ಮಾಡಿದೆ. ಇದೀಗ ಹೈಕೋರ್ಟ್ ಆರ್ ಅಶೋಕ್ ವಿರುದ್ಧ ತನಿಖೆ ನಡೆಸಲು ಎಸಿಬಿಗೆ ಅನುವು ಮಾಡಿಕೊಟ್ಟಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ