ಕಾಪು:
ಮಂಗಳೂರಿನಿಂದ ಬೆಳಗಾವಿಗೆ ಹೊರಟಿದ್ದ KSRTC ಬಸ್ಸೊಂದು ಸೇತುವಿಗೆ ಢಿಕ್ಕಿ ಹೊಡೆದ ಹೊಡೆದ ಘಟನೆ ಇಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರದಲ್ಲಿ ನಡೆದಿದೆ.
ಸರ್ಕಾರಿ ಬಸ್ಸು ಮಂಗಳೂರಿನಿಂದ ಬೆಳಗಾವಿ ಕಡೆಗೆ ಹೊರಟಿತ್ತು. ಆದರೆ ಚಾಲಕನ ನಿಯಂತ್ರಣ ತಪ್ಪಿ ಬಸ್ಸು ಉದ್ಯಾವರ ಸೇತುವೆಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿಯಾದ ರಭಸಕ್ಕೆ ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದೆ.
ಘಟನೆಯಲ್ಲಿ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ. ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ದೂರಲಾಗಿದೆ.
ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ