ಬೆಂಗಳೂರು:
ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸಲು ಮಹಾರಾಷ್ಟ್ರ ಸರ್ಕಾರ ಸಮ್ಮತಿಸಿದ್ದು ಇನ್ನೆರಡು ದಿನಗಳಲ್ಲಿ ನೀರು ಬರುವ ಸಾಧ್ಯತೆ ಇದೆ ಎಂದು ಮಹಾರಾಷ್ಟ್ರ ಸರ್ಕಾರವು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ನೀಡಿದೆ.
ಬೆಂಗಳೂರು:
ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸಲು ಮಹಾರಾಷ್ಟ್ರ ಸರ್ಕಾರ ಸಮ್ಮತಿಸಿದ್ದು ಇನ್ನೆರಡು ದಿನಗಳಲ್ಲಿ ನೀರು ಬರುವ ಸಾಧ್ಯತೆ ಇದೆ ಎಂದು ಮಹಾರಾಷ್ಟ್ರ ಸರ್ಕಾರವು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ನೀಡಿದೆ.
ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ತೀವ್ರ ಬರಗಾಲದಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದು ಕೃಷ್ಣಾ ನದಿಗೆ ನೀರು ಹರಿಸಲು ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ ಮನವಿಗೆ ಸ್ಪಂದಿಸಿರುವ ಮಹಾರಾಷ್ಟ್ರ ಸರ್ಕಾರ ನೀರು ಹರಿಸಲು ಕ್ರಮ ಕೈಗೊಂಡಿದೆ.
ಮಹಾರಾಷ್ಟ್ರ ಸರ್ಕಾರದ ನಡೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮಹಾರಾಷ್ಟ್ರ ಸಿಎಂಗೆ ಅಭಿನಂದನೆ ಸಲ್ಲಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
Powered by FILMY SCOOP | © 2022 | Praja Pragathi - All Rights Reserved
Powered by FILMY SCOOP | © 2022 | Praja Pragathi - All Rights Reserved