ಬೆಂಗಳೂರು : ವಾಕಿಂಗ್’​​ಗೆ ಬಂದಿದ್ದ ವ್ಯಕ್ತಿ ಅನುಮಾನಾಸ್ಪದ ಸಾವು!!

ಬೆಂಗಳೂರು:

man was walking to the park died suspicious

     ಮುಂಜಾನೆ ವಾಕಿಂಗ್​​ಗೆ ಎಂದು ಪಾರ್ಕ್​​ಗೆ ಬಂದಿರುವ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಗರದ ಆರ್.ಟಿ ನಗರದಲ್ಲಿ ನಡೆದಿದೆ. 

      ಇಂದು ಬೆಂಗಳೂರಿನ ಆರ್‌ಟಿ ನಗರದಲ್ಲಿ ವ್ಯಕ್ತಿಯೊಬ್ಬರು ವಾಕಿಂಗ್‌ಗೆ ಎಂದು ಪಾರ್ಕ್‌‌ಗೆ ಆಗಮಿಸಿದ್ದಾರೆ. ಆದರೆ, ವಾಕಿಂಗ್ ಮಾಡುತ್ತಿದ್ದ ವ್ಯಕ್ತಿ ದಿಢೀರನೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಮೃತ ದೇಹವನ್ನು ಆಂಬ್ಯಲೆನ್ಸ್‌ನಲ್ಲಿ ಶಿಫ್ಟ್‌ ಮಾಡಿದ್ದಾರೆ.
      ಆರೋಗ್ಯ ಇಲಾಖೆ ಸಿಬ್ಬಂದಿಗಳು ಮತ್ತು ಆರ್‌ಟಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರ್.ಟಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು, ಮೃತನ ಕುಟುಂಬಸ್ಥರ ಪತ್ತೆ ಕಾರ್ಯಕ್ಕೆ ಮುಂದಾಗಿದ್ದಾರೆ.
      ಸಾವಿಗೆ ನಿಖರವಾದ ಕಾರಣ ಏನು? ಎಂಬ ಕುರಿತು ಈವರೆಗೆ ತಿಳಿದುಬಂದಿಲ್ಲ. ಆರೋಗ್ಯ ಇಲಾಖೆ ಸಿಬ್ಬಂದಿಗಳು ಮತ್ತು ಆರ್‌ಟಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap