ನವದೆಹಲಿ:

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 8 ಸಾವಿರಕ್ಕೂ ಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಕಂಡು ಬಂದಿದ್ದರಿಂದ ದೇಶದ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2 ಲಕ್ಷದ ಗಡಿ ಸಮೀಪ ಬಂದಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಮಾಹಿತಿ ನೀಡಿದ್ದು, ದೇಶದಲ್ಲಿ ಈವರೆಗೆ ಒಟ್ಟು 1,98,706 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 5,598 ಜನರು ಸಾವಿಗೀಡಾಗಿದ್ದಾರೆ. ಸದ್ಯ 97,581 ಪ್ರಕರಣಗಳು ಸಕ್ರಿಯವಾಗಿದ್ದು, 95,527 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಇದಲ್ಲದೆ ನಿನ್ನೆ ಒಂದೇ ದಿನ ಕೊರೋನಾದಿಂದ 204 ಜನ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಸತ್ತವರ ಸಂಖ್ಯೆ 5,598ಕ್ಕೆ ಏರಿಕೆಯಾಗಿದೆ.
#CoronaVirusUpdates: #COVID19 India Tracker
(As on 02 June, 2020, 08:00 AM)▶️ Confirmed cases: 198,706
▶️ Active cases: 97,581
▶️ Cured/Discharged/Migrated: 95,527
▶️ Deaths: 5,598#IndiaFightsCorona#StayHome #StaySafe @ICMRDELHIVia @MoHFW_INDIA pic.twitter.com/Iaz24gXAFT
— #IndiaFightsCorona (@COVIDNewsByMIB) June 2, 2020
ಕೊರೋನಾ ಸೋಂಕು ಹರಡುವಿಕೆ ಬಹಳ ಕಡಿಮೆ ಇದ್ದಾಗ ಲಾಕ್ಡೌನ್ ಮಾಡಿ, ಸೋಂಕು ಹರಡುವಿಕೆ ತೀವ್ರವಾಗಿರುವಾಗ ಹೆಸರಿಗೆ ಮಾತ್ರ ಲಾಕ್ಡೌನ್ ಜಾರಿಗೊಳಿಸಿದ ಪರಿಣಾಮ ಭಾರತದಲ್ಲಿ ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ದುಪ್ಪಟ್ಟಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








