ಬೆಂಗಳೂರು :
ಮಾಜಿ ಡಿಸಿಎಂ ಪರಮೇಶ್ವರ್ ಅವರು 100 ಕೋಟಿ ರೂ. ಮೌಲ್ಯದ ಅಘೋಷಿತ ಆಸ್ತಿ ಹೊಂದಿರುವುದು ಐಟಿ ದಾಳಿಯಲ್ಲಿ ದೃಢಪಟ್ಟಿರುವುದರಿಂದ ಪರಮೇಶ್ವರ್ ಗೂ ಇಡಿ ಕಂಟಕ ಎದುರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
3 ದಿನಗಳಿಂದ ಪರಮೇಶ್ವರ್ ಒಡೆತನದ ವಿದ್ಯಾಸಂಸ್ಥೆಗಳಿಂದ ಐಟಿ ದಾಳಿ ನಡೆಯುತ್ತಿದೆ. ಶುಕ್ರವಾರ ಐಟಿ ಇಲಾಖೆ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ಹವಾಲಾ ಹಣದ ಬಗ್ಗೆ ಉಲ್ಲೇಖ ಮಾಡಿದೆ. ಹೀಗಾಗಿ ಹವಾಲಾ ವ್ಯವಹಾರ ಕಂಡು ಬಂದ ಹಿನ್ನೆಲೆಯಲ್ಲಿ ಇ.ಡಿ ಪ್ರಕರಣವನ್ನ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಮೆಡಿಕಲ್ ಕಾಲೇಜಿನ ಸೀಟ್ ಬ್ಲಾಕ್ ಮಾಡಿ ಅಕ್ರಮ ವಸೂಲಿ, ಹಣ ವರ್ಗಾವಣೆ ಮಾಡಿರುವುದು, ಜೊತೆಗೆ ಭೂಮಿ ಕರೀದಿ ಮಾಡುವಲ್ಲಿ ಮುನಿರಾಮಯ್ಯ ಅವರಿಗೆ 2 ಕೋಟಿ ರೂ. ಹಣ ನೀಡಿರುವ ಎಲ್ಲಾ ಅಂಶಗಳನ್ನು ಐಟಿಯವರು ಇಡಿ ಅಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾರೆ. ಹೀಗಾಗಿ ಪರಮೇಶ್ವರ್ ಗೆ ಇಡಿ ಸಂಕಷ್ಟ ಖಚಿತವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ