ಬೆಂಗಳೂರು :
ತಮಗೆ ಪ್ರಾಣ ಬೆದರಿಕೆ ಕರೆ ಬರುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ನೀಡುವಂತೆ ಸಚಿವ ಕೆ.ಎಸ್. ಈಶ್ವರಪ್ಪ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಆರ್ಟಿಕಲ್ 370 ಹಾಗೂ CAA ಬಗ್ಗೆ ಮಾತನಾಡದಂತೆ, ನನಗೆ ಜೀವ ಬೆದರಿಕೆ ಕರೆ ಬಂದಿದೆ, ಹೀಗಾಗಿ ಸಿಎಂ ಯಡಿಯೂರಪ್ಪ ಹಾಗೂ ಗೃಹ ಸಚಿವರಿಗೆ ತಿಳಿಸಿ, ನನಗೆ ಭದ್ರತೆ ಒದಗಿಸುವಂತೆ ಕೋರಿದ್ದೇನೆ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.
ಈ ಹಿಂದೆಯೂ ಅನಾಮಧೇಯ ವ್ಯಕ್ತಿಯಿಂದ ಸಚಿವರಿಗೆ ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
