ಬೆಂಗಳೂರು
ಊರಿಗೆ ಹೋಗಲು ಬಸ್ ನಿಲ್ದಾಣಕ್ಕೆ ನಡೆದು ಹೋಗುತ್ತಿದ್ದ ಕ್ಯಾಬ್ ಚಾಲಕನನ್ನು ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ ಬೆದರಿಸಿ 5 ಸಾವಿರ ನಗದು ಕಸಿದು ಪರಾರಿಯಾಗಿರುವ ದುರ್ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚೊಕ್ಕಸಂದ್ರದ ಕ್ಯಾಬ್ ಚಾಲಕ ವಸಂತ್ ಕುಮಾರ್ ಗುರುವಾರ ಮುಂಜಾನೆ 4.30ರ ವೇಳೆ ಮನೆಯಿಂದ ಹತ್ತಿರದ ಬಸ್ ನಿಲ್ದಾಣಕ್ಕೆ ಊರಿಗೆ ಹೋಗಲು ನಡೆದುಕೊಂಡು ಬರುತ್ತಿದ್ದಾಗ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅಡ್ಡಗಟ್ಟಿ ಬೆದರಿಸಿ 5 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿರುವ ಪೀಣ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ದುಷ್ಕರ್ಮಿಗಳ ಪತ್ತೆಗೆ ತೀವ್ರ ಶೋಧ ನಡೆಸಿದ್ದಾರೆ.








