ಗೋಣಿಕೊಪ್ಪಲು :
ಕಬ್ಬಿಣದ ಏಣಿ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಸ್ಪರ್ಷಿಸಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ತಾಲೂಕಿನ ಅರುವತೋಕ್ಲು ಗ್ರಾಮದ ಕಾಫಿ ತೋಟದಲ್ಲಿ ನಡೆದಿದೆ.
ಕಾವಾಡಿ ಗ್ರಾಮದ ಮೊಟ್ಟೇರ (50), ಇಗ್ಗುಡ ರವಿ (40) ಹಾಗೂ ಇಗ್ಗುಡ ಸತೀಶ್ (50) ಮೃತ ದುರ್ದೈವಿಗಳು. ತೆಂಗಿನ ತೋಟದಲ್ಲಿ ಕಾಯಿ ಕೀಳಲೆಂದು ಸತೀಶ್ ಅವರು ಏಣಿಯ ಮೂಲಕ ಹತ್ತುತ್ತಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಕಾಲು ಜಾರಿ ಬಿಡುತ್ತಾರೆ. ಹೀಗೆ ಬೀಳುವ ಸಂದರ್ಭದಲ್ಲಿ ಸಮೀಪದಲ್ಲೇ ಹಾದುಹೋಗುತ್ತಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸುತ್ತಾರೆ. ಈ ಸಂದರ್ಭದಲ್ಲಿ ಕೆಳಗಡೆ ಇದ್ದ ಇನ್ನಿಬ್ಬರು ಅವರನ್ನು ರಕ್ಷಿಸಲೆಂದು ಏಣಿಯನ್ನು ಸ್ಪರ್ಶಿಸಿದ ಸಂದರ್ಭದಲ್ಲಿ ಅವರಿಗೂ ವಿದ್ಯುತ್ ತಗುಲಿ ಸಾವಿಗೀಡಾಗಿದ್ದಾರೆ. ಮೂವರ ದೇಹಗಳು ಸುಟ್ಟು ಕರಕಲಾಗಿವೆ.
ರಾಮಧರ್ಮ ಎಂಬುವರಿಗೆ ಸೇರಿದ ತೋಟದಲ್ಲಿ ಈ ಘಟನೆ ನಡೆದಿದ್ದು, ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಗೋಣಿಕೊಪ್ಪಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ