ಕೋಲಾರ:
ಟಿಕ್‌ಟಾಕ್ ವೀಡಿಯೋ ಚಿತ್ರೀಕರಿಸಲು ಹೋಗಿ ಪದವಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಕೋಲಾರ ತಾಲೂಕಿನ ವಡಗೇರಿ ಗ್ರಾಮದಲ್ಲಿ ನಡೆದಿದೆ.
ಮಾಲಾ ಮೃತ ವಿದ್ಯಾರ್ಥಿನಿ. ಈಕೆ ಕೋಲಾರ ಮಹಿಳಾ ಕಾಲೇಜಿನ ಬಿ.ಎ. ಅಂತಿಮ ವರ್ಷದ ವಿದ್ಯಾರ್ಥಿನಿ.
ಕೃಷಿ ಹೊಂಡದ ಬಳಿ ಟಿಕ್‌ಟಾಕ್ ವೀಡಿಯೋ ಚಿತ್ರೀಕರಿಸುವ ವೇಳೆ ಈ ದುರಂತ ಸಂಭವಿಸಿದೆ. ವೀಡಿಯೊ ಮಾಡುತ್ತಿದ್ದಂತೆ ಮಾಯಾ ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದರೆನ್ನಲಾಗಿದೆ. ಹೊಂಡದಿಂದ ಮೇಲೆ ಬರಲಾಗದೆ ಉಸಿರುಗಟ್ಟಿ ಮಾಲಾ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕೋಲಾರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡಸಿದ್ದು, ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
