ಬೆಂಗಳೂರು :
ಜಮ್ಮುಕಾಶ್ಮೀರಕ್ಕೆ ವಿಶೇಷ ಸ್ಥಾನ ನೀಡಿದ್ದ 370 ವಿಧಿ ರದ್ದು ಮಾಡಿರುವ ಹಿನ್ನೆಲೆ ಉಗ್ರರು ದಕ್ಷಿಣಭಾರತದಲ್ಲಿ ದಾಳಿ ನಡೆಸಲು ಪ್ಲ್ಯಾನ್ ಮಾಡಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿದ ಬೆನ್ನಲ್ಲೇ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಕೇಂದ್ರ ಗುಪ್ತಚರ ಇಲಾಖೆಯ ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ಪೊಲೀಸರು ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ. ಮೆಜೆಸ್ಟಿಕ್, ಮೆಜೆಸ್ಟಿಕ್ ರೈಲ್ವೆ ನಿಲ್ದಾಣ, ಮೆಟ್ರೋ ನಿಲ್ದಾಣಗಳಲ್ಲಿ ಟೈಟ್ ಸೆಕ್ಯುರಿಟಿ ನಿಯೋಜನೆ ಮಾಡಲಾಗಿದೆ.
ಮಂಗಳೂರಿನ ಕದ್ರಿ ಲಾಡ್ಜ್ ನಲ್ಲಿ 9 ಮಂದಿ ಶಂಕಿತರನ್ನು ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. ಬಂಧಿತರು ಕೇರಳ, ಮಡಿಕೇರಿ ಮತ್ತು ಮಂಗಳೂರು ಮೂಲದವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ