ಬೆಂಗಳೂರು :
ಕೊರೊನಾ ವೈರಸ್ ಹಾಗೂ ಲಾಕ್‌ಡೌನ್ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳುಗಳ ಹಿಂದೆಯೇ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮಕ್ಕೆ ಪ್ರವಾಸಿಗರನ್ನು ನಿಷೇಧಿಸಲಾಗಿದೆ.
ಕೊರೊನಾ ವೈರಸ್ ಹರಡುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರವಾಸಿ ತಾಣಗಳಿಗೆ ಜನರು ಬರುವುದನ್ನು ನಿಷೇಧಿಸಲಾಗಿದೆ. ಆದರೆ ಪ್ರವಾಸಿಗರು ಮಾತ್ರ ಅದನ್ನು ಕಿವಿಗೆ ಹಾಕಿಕೊಳ್ಳುತ್ತಿಲ್ಲ. ಕೊರೊನಾ ವೈರಸ್‌ಗೂ ಅಂಜದೇ ನಂದಿ ಹಿಲ್ಸ್‌ಗೆ ಬರುವ ಪ್ರವಾಸಿಗರು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ತಲೆನೋವಾಗಿದ್ದಾರೆ.
ನಂದಿಗಿರಿಧಾಮಕ್ಕೆ ಪ್ರವಾಸಿಗರ ನಿಷೇಧ ಮುಂದುವರಿಸಲಾಗಿದೆ. ಬುರುವ ಜುಲೈ 31ರ ವರೆಗೆ ಪ್ರವಾಸಿಗರು ನಂದಿ ಹಿಲ್ಸ್‌ಗೆ ಬರಬಾರದು ಎಂದು ಎಂದು ಜಿಲ್ಲಾಧಿಕಾರಿ ಆರ್. ಲತಾ ಅವರು ಸೂಚಿಸಿದ್ದಾರೆ.
ಆದರೂ ಪ್ರತಿನಿತ್ಯ ನೂರಾರು ಪ್ರವಾಸಿಗರು ನಂದಿಗಿರಿಗೆ ಬಂದು ವಾಪಸ್ ಹೋಗುತ್ತಿದ್ದಾರೆ. ಸ್ಥಳೀಯರೂ ಕೂಡ ಪ್ರವಾಸಿಗರು ಬರುವುದು ಬೇಡ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ