ಧಾರವಾಡ :
ಬೆಳ್ಳಂಬೆಳಗ್ಗೆ ಟೆಂಪೋ ಟ್ರಾವೆಲರ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿ ನಡೆದಿದೆ.
ಧಾರವಾಡದ ಲೇಡಿಸ್ ಕ್ಲಬ್‌ನ ಮಹಿಳೆಯರು ಸಂಕ್ರಮಣ ಹಿನ್ನೆಲೆ ಟೆಂಪೋ ಟ್ರಾವೆಲರ್‌ನಲ್ಲಿ ಗೋವಾಕ್ಕೆ ಹೊರಟಿದ್ದರು. ಒಟ್ಟು 17 ಮಂದಿ ಮಹಿಳೆಯರು ಗೋವಾಕ್ಕೆ ತೆರಳುತ್ತಿದ್ದರು. ಟೆಂಪೋದಲ್ಲಿದ್ದ 10 ಮಂದಿ ಮಹಿಳೆಯರು ಮೃತಪಟ್ಟಿದ್ದು. ಈ ಪೈಕಿ 5 ಮಂದಿಯ ಸ್ಥಿತಿ ಗಂಭೀರವಾಗಿದೆ. ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ.
ಘಟನೆಯಿಂದಾಗಿ ಟೆಂಪೋ ಟ್ರಾವೆಲರ್ ಹಾಗೂ ಟಿಪ್ಪರ್‌ನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.ಟೆಂಪೋ ನುಜ್ಜು ಗುಜ್ಜಾಗಿದ್ದರಿಂದ ಒಳಗೆ ಸಿಲುಕಿರುವ ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.
ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ