ಬೆಂಗಳೂರು :
ಇಂದು ಮಧ್ಯಾಹ್ನದ ಬಳಿಕ ನೂತರ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಈಗಾಗಲೇ 17 ಮಂದಿ ಶಾಸಕರು ಮಂತ್ರಿಯಾಗಿ ಪ್ರಯಾಣವಚನ ಸ್ವೀಕರಿಸಿದ್ದಾರೆ. ಆದರೆ ಖಾತೆ ಹಂಚಿಕೆಯಾಗಿರಲಿಲ್ಲ.
ನಿನ್ನೆ ಸಿಎಂ ಯಡಿಯೂರಪ್ಪ ಅವರು ದೆಹಲಿಗೆ ತೆರಳಿ ಅಮಿತ್ ಶಾ ರನ್ನು ಭೇಟಿ ಮಾಡಿ ಸುಮಾರು ಒಂದೂವರೆ ಗಂಟೆಗಳ ಕಾಲ ಈ ಬಗ್ಗೆ ಚರ್ಚೆ ನಡೆಸಿದ್ದು, ಅವರ ಸೂಚನೆಯ ಮೇರೆಗೆ ಇಂದು ಮಧ್ಯಾಹ್ನ ನೂತನ ಸಚಿವರಿಗೆ ಖಾತೆ ಹಂಚಿಕೆಗೆ ಮಾಡಲಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ