ಬೆಂಗಳೂರು :
ಬಹುಕೋಟಿ ಐಎಂಎ ಜ್ಯುವೆಲ್ಸ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ.
ಸಚಿವ ಜಮೀರ್ ಅಹ್ಮದ್ ರಿಚ್ಮಂಡ್ ಟೌನ್ ನ ಸರ್ಫೆಂಟೈನ್ ರಸ್ತೆಯಲ್ಲಿರುವ ನಿವೇಶನವನ್ನು ಮನ್ಸೂರ್ ಖಾನ್ ಗೆ ಮಾರಾಟ ಮಾಡಿದ್ದರು. ಈ ಬಗ್ಗೆ ವಿವರಣೆಗೆ ಹಾಜರಾಗುವಂತೆ ಇ.ಡಿ. ಅಧಿಕಾರಿಗಳು ಜಮೀರ್ ಅವರಿಗೆ ನೋಟಿಸ್ ನೀಡಿದ್ದರು. ಜೂನ್ 5 ರಂದು ಖುದ್ದು ಹಾಜರಾಗಿ ಐಎಂಎ ಹಗರಣದ ಆರೋಪಿ ಮನ್ಸೂರ್ ಖಾನ್ ಜೊತೆ ನಡೆಸಿದ ನಿವೇಶನ ಮಾರಾಟ ಸಂಬಂಧ ಮಾಹಿತಿ ನೀಡುವಂತೆ ನೋಟಿಸ್ ಜಾರಿಗೊಳಿಸಲಾಗಿತ್ತು.
ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಶಾಂತಿನಗರದ ಇಡಿ ಕಚೇರಿಗೆ ಸಚಿವರು ಹಾಜರಾಗಲಿದ್ದು, ಅಧಿಕಾರಿಗಳು ನಡೆಸುವ ವಿಚಾರಣೆ ಎದುರಿಸಲಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ