ದ್ವಿತೀಯ ಪಿಯು ಫಲಿತಾಂಶ ಪ್ರಕಟ!!

ಬೆಂಗಳೂರು:

      ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಬೆಳಗ್ಗೆ 11 ಗಂಟೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಮಧ್ಯಾಹ್ನ 12 ಗಂಟೆ ನಂತರ ವೆಬ್​ಸೈಟ್​ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

      ವಿದ್ಯಾರ್ಥಿಗಳು http://pue.kar.nic.inಮತ್ತು http://www.karresults.nic.in ವೆಬ್​ಸೈಟಿನ ಮೂಲಕ ಫಲಿತಾಂಶ ನೋಡಬಹುದು.  

      ಈ ಬಾರಿ ಆಯಾ ಮೌಲ್ಯಮಾಪನ ಕೇಂದ್ರಗಳಿಂದಲೇ ಮೌಲ್ಯಮಾಪಕರು ಆನ್​ಲೈನ್​ನಲ್ಲಿ ಅಂಕಗಳನ್ನು ಅಪ್​ಲೋಡ್ ಮಾಡಿದ್ದರಿಂದ ಮೌಲ್ಯಮಾಪನ ಪ್ರಕ್ರಿಯೆ ಬೇಗ ಮುಗಿದಿದೆ. ಇನ್ನು ಏ. 16 ರಂದು ಆಯಾ ಪದವಿ ಪೂರ್ವ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪದವಿಪೂರ್ವ ಕಾಲೇಜು ಇಲಾಖೆ ನಿರ್ದೇಶಕಿ ಸಿ.ಶಿಖಾ ಮಾಹಿತಿ ನೀಡಿದ್ದಾರೆ.

      ಇಂದು ಪ್ರಕಟವಾಗುವ ಪ್ರಸಕ್ತ ಸಾಲಿನ ದ್ವಿತೀಯ ಪಿಯು ಫಲಿತಾಂಶದಲ್ಲಿ ಸುಮಾರು 6.73 ಲಕ್ಷ ವಿದ್ಯಾರ್ಥಿಗಳ ಹಣೆಬರಹ ನಿರ್ಧಾರವಾಗಲಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap