ದೆಹಲಿ :
ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನರು ದಿನದ ಅಡುಗೆಯಲ್ಲಿ ಸಾಮಾನ್ಯವಾಗಿ ಬಳಕೆಯಲ್ಲಿರುವ ಟೊಮ್ಯಾಟೋಗೆ ಕೂಡ ದುಬಾರಿ ಬೆಲೆ ತೆತ್ತು ಖರೀದಿಸಬೇಕಾಗಲಿದೆ.
60-70 ರೂಪಾಯಿ ಬೆಲೆ ಮುಟ್ಟಿ ಗ್ರಾಹಕರ ಕಣ್ಣಲ್ಲಿ ಈರುಳ್ಳಿ ನೀರು ತರಿಸಿದ್ದು ಆಯ್ತು, ಈಗ ಟೊಮ್ಯಾಟೊ ಸರದಿ. ಪ್ರವಾಹ ಮತ್ತು ಹವಾಮಾನ ವೈಪರೀತ್ಯಗಳಿಂದಾಗಿ ಟೊಮ್ಯಾಟೊ ಪೂರೈಕೆ ಕಡಿಮೆಯಾಗುತ್ತಿದ್ದು, ದೆಹಲಿಯಲ್ಲಿ ಬೆಲೆ ಗಗನಕ್ಕೇರುತ್ತಿದೆ.
ಪ್ರಮುಖ ಪೂರೈಕೆದಾರರಾದ ಕರ್ನಾಟಕ, ಮಹಾರಾಷ್ಟ್ರದಲ್ಲಿ ಪ್ರವಾಹ ಉಂಟಾದ ಕಾರಣಕ್ಕೆ ಟೊಮ್ಯಾಟೊ ಬೆಲೆ ದ್ವಿಗುಣಗೊಂಡಿದೆ. ಕಳೆದ ಕೆಲವು ದಿನಗಳಿಂದ 40-60 ರೂಪಾಯಿಗಳ ತನಕ ದೆಹಲಿಯಲ್ಲಿ ಟೊಮ್ಯಾಟೊ ಮಾರಾಟ ಮಾಡಲಾಗುತ್ತಿದೆ.
ಪೂರೈಕೆ ಕಡಿಮೆ ಇರುವ ಕಾರಣಕ್ಕೆ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಹೆಚ್ಚಾದ್ರೂ ಆಶ್ಚರ್ಯ ಇಲ್ಲ ಎನ್ನುತ್ತಾರೆ ವ್ಯಾಪಾರಿಗಳು. ಟೊಮ್ಯಾಟೊ ಮತ್ತು ಈರುಳ್ಳಿಯ ಬೆಲೆ ಸಿಕ್ಕಾಪಟ್ಟೆ ಜಾಸ್ತಿಯಾಗುತ್ತಿದ್ದು, ನಮ್ಮ ಜೇಬಿಗೆ ಕತ್ತರಿ ಬೀಳುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
