ನವದೆಹಲಿ :
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 49,292 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 781 ಮಂದಿ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 15,31,699ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 34,193ಕ್ಕೆ ಏರಿಕೆಯಾಗಿದೆ.
48,513 new #COVID19 cases and 768 deaths reported across the country in the last 24 hours, taking the total number of cases to 15,31,669 till date : Ministry of Health https://t.co/RLGfsiglXr
— ANI (@ANI) July 29, 2020
ಇನ್ನು 15,31,669ಕ್ಕೆ ಮಂದಿ ಸೋಂಕಿತರ ಪೈಕಿ 9,88,030 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ ದೇಶದಲ್ಲಿ 5,09,447 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
